ಅವಲಕ್ಕಿಯನ್ನು ತೊಳೆದು ಸ್ವಲ್ಪ ಹೊತ್ತು ನೆನೆಯಲು ಬಿಡಿ. ಬಾಣೆಲೆಯಲ್ಲಿ ಎಣ್ಣೆ ಹಾಕಿ ಕಾದ ನಂತರ ಸ್ವಲ್ಪ ಸಾಸಿವೆ, ಕಡಲೆಕಾಯಿ ಬೀಜ, ಕಡಲೆಬೇಳೆ, ಉದ್ದಿನ ಬೇಳೆ ಕರಿಬೇವಿನಸೊಪ್ಪು ಹಾಗೂ ಅರಿಶಿಣ ಹಾಕಿ ಬಾಡಿಸಿ.
ಇದಕ್ಕೆ ಪುಳಿಯೋಗರೆ ಪುಡಿ ಅಥವಾ ಗೊಜ್ಜು, ಬೆಲ್ಲ ಹಾಗೂ ಹುಣಸೆಹಣ್ಣಿನ ರಸ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಸಣ್ಣ ಉರಿಯಲ್ಲಿ ಬಾಡಿಸಿ. ಬಳಿಕ ಇದಕ್ಕೆ ಮೊದಲೆ ನೆನೆಸಿಟ್ಟುಕೊಂಡ ಅವಲಕ್ಕಿ ಹಾಗೂ ಕೊಬ್ಬರಿ ತುರಿಯನ್ನು ಹಾಕಿ ಚೆನ್ನಾಗಿ ಬಾಡಿಸಿ ಸಣ್ಣ ಉರಿಯಲ್ಲಿ ಬೇಯಿಸಿರಿ. ಬೇಕಾದರೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಬಹುದು.
ಬೇಕಾಗುವ ಪದಾರ್ಥಗಳು. ಅಕ್ಕಿ- 3 ಬಟ್ಟಲು. ಅವಲಕ್ಕಿ- 1 ಬಟ್ಟಲು. ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ. ನೀರಿನಲ್ಲಿ ಅಕ್ಕಿಯನ್ನು ಚೆನ್ನಾಗಿ ತೊಳೆದು ಹಿಂದಿನ ದಿವಸ ರಾತ್ರಿ ಅಕ್ಕಿ ನೆನಸಬೇಕು. ಮರು ದಿವಸ ಬೆಳಿಗ್ಗೆ 1 ಬಟ್ಟಲು ಅವಲಕ್ಕಿ 5 ನಿಮಿಷ ನೆನೆಸಿ ಅದನ್ನು ಅಕ್ಕಿಯ ಜೊತೆ ನುಣ್ಣಗೆ ರುಬ್ಬಬೇಕು. ಆಮೇಲೆ ರುಬ್ಬಿದ ಹಿಟ್ಟನ್ನು ಒಂದು ಪಾತ್ರೆಗೆ ಹಾಕಬೇಕು. ಅರ್ಧ ಚಮಚ ಉಪ್ಪು ಹಾಕಿ ಒಲೆಯ ಮೇಲೆ ಇಟ್ಟು ಹಿಟ್ಟನ್ನುಬೇಯಿಸಬೇಕು.
ಕೈಗೆ ಹಿಟ್ಟು ಹಿಡಿಯದಂತೆ ಚೆನ್ನಾಗಿ ಬೇಯಿಸಬೇಕು . ಹಿಟ್ಟು ಮುದ್ದೆಯಾದ ನಂತರ ಇಳಿಸಬೇಕು. ಆ ಮೇಲೆ ಹಿಟ್ಟು ತಣಿದ ನಂತರ ಉಂಡೆ ಕಟ್ಟಬೇಕು. ಬೇಯಿಸಿದ ಒಂದೊಂದು ಉಂಡೆಯನ್ನು ಶಾವಿಗೆ ಒರಳಿಗೆ ಹಾಕಿ ಒತ್ತಬೇಕು. ಶಾವಿಗೆಗೆ ಕಾಯಿಹಾಲು ಹಾಕಿಕೊಂಡು ತಿನ್ನಬೇಕು.
ಕಾಯಿಹಾಲು ಮಾಡುವ ವಿಧಾನ. ಬೇಕಾಗುವ ಪದಾರ್ಥಗಳು. ತೆಂಗಿನಕಾಯಿ ತುರಿ-1 ಬಟ್ಟಲು. ಬೆಲ್ಲ-1 ಉಂಡೆ ಸಣ್ಣದು. ನೀರು-2 ಬಟ್ಟಲು. ಗಸಗಸೆ-ಸ್ವಲ್ಪ. ಏಲಕ್ಕಿ-2. ಲವಂಗ-1.
ಮಾಡುವ ವಿಧಾನ.
ತೆಂಗಿನಕಾಯಿ ತುರಿ ಜೊತೆಯಲ್ಲಿ ಏಲಕ್ಕಿ, ಗಸಗಸೆ, ಲವಂಗ, ನೀರು ಹಾಕಿ ನುಣ್ಣಗೆ ರುಬ್ಬಬೇಕು. ರುಬ್ಬಿದ ಹಾಲನ್ನು ಸೋಸಬೇಕು. ಆಮೇಲೆ ಒಂದು ಪಾತ್ರೆಗೆ ಅರ್ಧ ಕಪ್ ಬೆಲ್ಲ, ಕಾಲು ಕಪ್ ನೀರು ಹಾಕಿ. ಬೆಲ್ಲ ಕರಗುವ ತನಕ ಬಿಸಿಮಾಡಿ ಪಾಕ ಮಾಡಿಕೊಳ್ಳಬೇಕು. ನಂತರ ಇದಕ್ಕೆ ರುಬ್ಬಿದ ಮಿಶ್ರಣ ಮತ್ತು ಒಂದೂವರೆ ಕಪ್ ತೆಳುವಾದ ತೆಂಗಿನಕಾಯಿ ಹಾಲು ಹಾಕಿ ಬೆರಸಬೇಕು.
ಏಲಕ್ಕಿ ಪುಡಿ, ಒಂದು ಚಿಟಿಕೆ ಉಪ್ಪು ಹಾಕಿ , ಮಧ್ಯಮ ಉರಿಯಲ್ಲಿ 3 ರಿಂದ 4 ನಿಮಿಷ ಕುದಿಸಿಬೇಕು. ಇದೀಗ ಕಾಯಿ ಹಾಲು ಕೂಡ ಸಿದ್ಧವಾಗುತ್ತದೆ. ನಂತರ ಒತ್ತಿಟ್ಟ ಶಾವಿಗೆಗೆ ಕಾಯಿ ಹಾಲು ಬೆರೆಸಿಕೊಂಡು ಸವಿಯಬಹುದು.
ಮೊದಲಿಗೆ ಒಂದು ಪಾತ್ರೆಯಲ್ಲಿ ಸಣ್ಣಗೆ ಹೆಚ್ಚಿದ ಈರುಳ್ಳಿ, ಖಾರದ ಪುಡಿ, ಉಪ್ಪು ಎಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಿ 20 ನಿಮಿಷ ನೆನೆಯಲು ಬಿಡಿ. ನಂತರ ಇದಕ್ಕೆ ಕಾರ್ನ್ ಫ್ಲೋರ್,ಮೈದಾ ಹಿಟ್ಟು, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ನೀರನ್ನು ಚುಮುಕಿಸಿಕೊಂಡು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ. ಒಲೆಯ ಮೇಲೆ ಬಾಣಲೆಯಿಟ್ಟು, ಎಣ್ಣೆ ಹಾಕಿ. ಎಣ್ಣೆಕಾದ ನಂತರ ಉಂಡೆಗಳನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದಿಟ್ಟುಕೊಳ್ಳಿ.
ನಂತರ ಒಲೆಯ ಮೇಲೆ ಬಾಣಲೆ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ. ಇದೀಗ ಸಣ್ಣಗೆ ಕತ್ತರಿಸಿಕೊಂಡ ಶುಂಠಿ ಹಾಗೂ ಬೆಳ್ಳುಳ್ಳಿ, ಸ್ಪ್ರಿಂಗ್ ಆನಿಯನ್ ಹಾಕಿ ಕೆಂಪಗೆ ಹುರಿದುಕೊಳ್ಳಿ. ಇದಕ್ಕೆ ಸಾಸ್ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮಿಶ್ರಣ ಮಾಡಿ. ನಂತರ ಸ್ವಲ್ಪ ನೀರಿಗೆ ಕಾರ್ನ್ ಫ್ಲೋರ್ ಮಿಶ್ರಣ ಮಾಡಿಕೊಳ್ಳಿ ಸ್ಲರಿಯನ್ನು ಸಿದ್ಧಪಡಿಸಿಕೊಳ್ಳಿ.
ಇದೀಗ ಈ ಮಿಶ್ರಣವನ್ನು ಮಸಾಲೆಯೊಂದಿಗೆ ಸೇರಿಸಿ ಚೆನ್ನಾಗಿ ಕುದಿಯಲು ಬಿಡಿ. ಮಸಾಲೆ ಗಟ್ಟಿಯಾಗುತ್ತಿದ್ದಂತೆ ಈಗಾಗಲೇ ಎಣ್ಣೆಯಲ್ಲಿ ಫ್ರೈ ಮಾಡಿಕೊಂಡ ಉಂಡೆಗಳನ್ನು ಹಾಗೂ ಸ್ವಲ್ಪ ಸ್ಪ್ರಿಂಗ್ ಆನಿಯನ್ ನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ ರುಚಿಕರವಾದ ಈರುಳ್ಳಿ ಮಂಚೂರು ರೆಡಿ.
ಮಾಡುವ ವಿಧಾನ. ದೊಡ್ಡ ಕಡಾಯಿಯಲ್ಲಿ ತುಪ್ಪವನ್ನು ಬಿಸಿ ಮಾಡಿ, ತೆಂಗಿನಕಾಯಿ ತುರಿ ಸೇರಿಸಿ. ತೇವಾಂಶ ಒಣಗುವವರೆಗೂ ಹುರಿಯಿರಿ. ಈ ಮಿಶ್ರಣಕ್ಕೆ ಬೆಲ್ಲ ಸೇರಿಸಿ ಮತ್ತು ಮಧ್ಯಮ ಉರಿಯಲ್ಲಿ ಬೇಯಿಸಿ.
ಬೆಲ್ಲ ಕರಗುವ ತನಕ ಬೇಯಿಸಬೇಕು. ಇದಕ್ಕೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಸಿದ್ಧವಾಗಿರುವ ಮಿಶ್ರಣವನ್ನು ತೆಗೆದುಕೊಂಡು ಉಂಡೆ ಮಾಡಿ. ಇದೀಗ ರುಚಿಕರವಾದ ಕೊಬ್ಬರಿ ಲಡ್ಡು ಸವಿಯಲು ಸಿದ್ಧ.