ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.
ಕೆಲವು ಗಾದೆಗಳು. ವೇದ ಸುಳ್ಳಾದರು ಗಾದೆ ಸುಳ್ಳಾಗದು. ಮಾತು ಆಡಿದರೆ ಹೋಯ್ತು,ಮುತ್ತು ಒಡೆದರೆ ಹೋಯ್ತು. ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು. ಮಾಡಿದ್ದುಣ್ಣೋ ಮಹಾರಾಯ. ದೂರದ ಬೆಟ್ಟ ನುಣ್ಣಗೆ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ. ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ. ಜಟ್ಟಿ ಅಡಿಗೆ ಬಿದ್ದರೂ ಮೂಗು ಮೇಲಿದೆ ಅಂದ. ನೀನು ಹೋದ ದಾರಿಲಿ ಹಿ೦ದಕ್ಕ ಬರದೆ ಹೊಗ. ನಿನ್ನ ಬಾಯಾಗೆ ಮಣ್ಣು ಹಾಕ. ನೀ ನೆಗೆದು ಬಿದ್ದು ನಲ್ಲಿಕಾಯಾಗ. ನಿನ್ನ ಮನೆ ಎಕ್ಕುಟ್ಟಿ ಹೋಗ. ನಿನ್ನ ನಾಲಗೆ ಸೇದು ಹೋಗ. ಅಳಿವುದೇ ಕಾಯ ಉಳಿವುದೇ ಕೀರ್ತಿ. ಅಂದು ಬಾ ಅಂದ್ರೆ ಮಿಂದು ಬಂದ. ಅಂಗೈ ಹುಣ್ಣಿಗೆ ಕನ್ನಡಿ ಯಾಕೆ. ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ. ಬೇಲೀನೇ ಎದ್ದು ಹೊಲ ಮೇಯ್ದಂತೆ. ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು. ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ. ಹೊಳೆಗೆ ಸುರಿದರೂ ಅಳೆದು ಸುರಿ. ಹುಣ್ಣಿಮೆ ಬರುವತನಕ ಅಮಾಸೆ ನಿಲ್ಲದು, ಅಮಾಸೆ ಬರುವತನಕ ಹುಣ್ಣಿಮೆ ನಿಲ್ಲದು. ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ. ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ. ಆಡೋದು ಮಡಿ ಉಂಬೋದು ಮೈಲಿಗೆ. ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ. ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು ತುತ್ತು ತೂಕ ಕೆಡಿಸ್ತು ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ ಬಂದದ್ದೆಲ್ಲಾ ಬರಲಿ ಗೋವಿಂದನ ದಯೆಯೊಂದಿರಲಿ ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ ಡಾವರ ಹತ್ತಿದಾಗ ದೇವರ ಧ್ಯಾನ ಹೋದ ಬದುಕಿಗೆ ಹನ್ನೆರಡು ದೇವರು ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ ಸುಳ್ಳು ದೇವರಿಗೆ ಕಳ್ಳ ಪೂಜಾರಿ ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ಅಜ್ಜ! ಮದುವೆ ಅಂದ್ರೆ ನನಗೋ ಅಂದ ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ ಅಕ್ಕ ಬರಬೇಕು ಅಕ್ಕಿ ಮುಗೀಬಾರದು ಅಕ್ಕ ನನ್ನವಳಾದ್ರೆ ಬಾವ ನನ್ನವನೇನು ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು ಅಕ್ಕನ ಚಿನ್ನವಾದ್ರೂ ಅಕ್ಕಸಾಲಿ ಕದಿಯದೆ ಬಿಡ ಅಕ್ಕನ ಹಗೆ ಬಾವನ ನಂಟು ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು ಅಕ್ಕಿ ಅಂದ್ರೆ ಪ್ರಾಣ, ನೆಂಟ್ರು ಅಂದ್ರೆ ಜೀವ ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ ಅರಗಿನಂತೆ ತಾಯಿ, ಮರದಂತೆ ಮಕ್ಕಳು ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ? ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು. ಒಲ್ಲದ ಗಂಡಂಗೆ ಬೆಣ್ಣೇಲಿ ಕಲ್ಲು ಗಂಡ-ಹೆಂಡಿರ ಜಗಳ ತಿಂದು/ಉಂಡು ಮಲುಗೊವರೆಗೆ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು. ತಾಯಂತೆ ಕರು ನಾಯಂತೆ ಬಾಲ ತಾಯಂತೆ ಮಗಳು ನೂಲಂತೆ ಸೀರೆ ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ ತಾಯಿ ಕಂಡರೆ ತಲೆ ನೋವು ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ. ಅಲ್ಪರ ಸಂಗ ಅಭಿಮಾನ ಭಂಗ ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು